Karnataka News

*ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ: ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿನಿ ಸಾವು*

ಪ್ರಗತಿವಾಹಿನಿ ಸುದ್ದಿ: ಶಾಲೆಯ ಶೌಚಾಲಯದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯಿಂದ ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದಲ್ಲಿ ನಡೆದಿದೆ.

ಸಾನ್ವಿ ಬಸವರಾಜ್ ಮೃತ ವಿದ್ಯಾರ್ಥಿನಿ. ಎರಡನೆ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಶಾಲೆಯಲ್ಲಿ ಶೌಚಾಲಯಕ್ಕೆಂದು ಹೋಗಿದ್ದ ವೇಳೆ ಈ ದುರಂತ ಸಂಭವಿಸಿದೆ.

ಶಾಲೆ ಆವರಣದಲ್ಲಿ ತೆಗೆದಿದ್ದ ಬೋರ್ವೆಲ್ ಗೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆಯಲಾಗಿತ್ತು. ಮೇನ್ ಲೈನ್ ನಿಂದ ಪಡೆದಿದ್ದ ವಿದ್ಯುತ್ ಸಂಪರ್ಕದ ವೈರ್ ತುಂಡಾಗಿ ಶೌಚಾಲಯದಲ್ಲಿ ಬಿದ್ದಿತ್ತು. ಈ ವೇಳೆ ಶೌಚಾಲಯಕ್ಕೆ ಹೋಗಿದ್ದ ವಿದ್ಯಾರ್ಥಿನಿ ಕರೆಂಟ್ ಶಾಲ್ ಹೊಡೆದು ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

Home add -Advt

Related Articles

Back to top button