Latest

ಚಿರತೆ ದಾಳಿಗೆ ವಿದ್ಯಾರ್ಥಿ ಬಲಿ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಚಿರತೆ ದಾಳಿಗೆ ಬೆಟ್ಟಕ್ಕೆ ತೆರಳಿದ್ದ ಯುವಕ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನಲ್ಲಿ ನಡೆದಿದೆ.

ಎಂ.ಎಲ್.ಹುಂಡಿ ಗ್ರಾಮದ ಮಂಜುನಾಥ್ (20) ಮೃತ ಯುವಕ. ಮೈಸೂರಿನ ವಿದ್ಯಾವರ್ಧಕ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಮಂಜುನಾಥ್, ಕಾರ್ತಿಕ ಸೋಮವಾರ ಹಿನ್ನೆಲೆಯಲ್ಲಿ ಟಿ.ನರಸೀಪುರ ತಾಲೂಕಿನ ಉಕ್ಕಲಗೆರೆ ಗ್ರಾಮದ ಮಲ್ಲಿಕಾರ್ಜುನಸ್ವಾಮಿ ಬೆಟ್ಟಕ್ಕೆ ತೆರಳಿದ್ದರು‌. ಈ ವೇಳೆ ಬೆಟ್ಟದ ಸಮೀಪ ಯುವಕನ ಮೇಲೆ ಚಿರತೆ ಹಠಾತ್ ದಾಳಿ ನಡೆಸಿದೆ. ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ‌, ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿದ ಬಾಲಕನ ಕುಟುಂಬಕ್ಕೆ ಡಾ.ಸೋನಾಲಿ ಸರ್ನೋಬತ್ ನೆರವು

https://pragati.taskdun.com/belgaum-news/dr-sonali-sarnobat-helps-the-family-of-the-boy-who-died-due-to-electric-shock/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button