Belagavi NewsBelgaum NewsKannada NewsKarnataka News

*6 ಜಿಲ್ಲೆಗೆ ಆರೆಂಜ್ ಹಾಗೂ 9 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಜೂನ್ 29 ರಿಂದ ಜುಲೈ ಆರಂಭದವರೆಗೆ ಮಳೆ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.

Home add -Advt

ರಾಜ್ಯದ ಪ್ರಮುಖ 6 ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಕೊಡಗು ಮತ್ತು ಚಿಕ್ಕಮಂಗಳೂರಿನಲ್ಲಿ ಜೂನ್ 29 ರಿಂದ ಜುಲೈ 1 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ಇನ್ನು ಹಾಸನ, ಕಲಬುರ್ಗಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಮತ್ತು ಧಾರವಾಡ ಸೇರಿದಂತೆ 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇತ್ತ ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು ನಗರದ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟ‌ರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ಇರಲಿದೆ ಎಂದು ವರದಿಯಾಗಿದೆ.

Related Articles

Back to top button