
ಪ್ರಗತಿವಾಹಿನಿ ಸುದ್ದಿ; ರಾಮನಗರ: ವಸತಿ ಶಾಲೆಯ ನೀರಿನ ಟ್ಯಾಂಕ್ ವಿದ್ಯಾರ್ಥಿಯ ಮೇಲೆ ಕುದ್ಸಿದು ಬಿದ್ದು, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.
ಚೆನ್ನಪಟ್ಟಣ ತಾಲೂಕಿನ ಹೆಚ್.ಗೊಲ್ಲಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ಈ ದುರಂತ ಸಂಭವಿಸಿದೆ. 6ನೇ ತರಗತಿ ವಿದ್ಯಾರ್ಥಿ ಕೌಶಿಕ್ ಮೃತ ದುರ್ದೈವಿ. ಇನ್ನೋರ್ವ ವಿದಾರ್ಥಿ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆ ದಾಖಲಿಸಲಾಗಿದೆ.
ವಸತಿ ಶಾಲೆಯ ಹಾಸ್ಟೇಲ್ ಹೊರಭಾಗದಲ್ಲಿ ನೀರು ಸಂಗ್ರಹಕ್ಕೆಂದು ಕಟ್ಟಲಾಗಿದ್ದ ಟ್ಯಾಂಕ್ ಗೋಡೆ ಏಕಾಏಕಿ ವಿದ್ಯಾರ್ಥಿ ಮೆಲೆ ಕುಸಿದು ಬಿದ್ದಿದೆ. ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ವಿದ್ಯಾರ್ಥಿ ಸ್ನಾನಕ್ಕೆಂದು ಹೋಗಿದ್ದಾಗ ಈ ಘಟನೆ ಸಂಭವಿಸಿದೆ.
ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ