
ಪ್ರಗತಿವಾಹಿನಿ ಸುದ್ದಿ: ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಶಿವಮೂಗ್ಗ ಜಿಲ್ಲೆಯ ಗವಟೂರು ಗ್ರಾಮದ ಹಳಿಯೂರಲ್ಲಿ ನಡೆದಿದೆ.
ಕಾರ್ತಿಕ್ (20 ಮೃತಪಟ್ಟ ಯುವಕ. ಕಾರ್ತಿಕ್ ರಿಪ್ಪನ್ ಪೇಟೆ ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಬಿಎ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಬೆಳಿಗ್ಗೆ ಮನೆ ಅಂಗಳದ ಕೈ ತೋಟದಲ್ಲಿ ಕೆಲಸ ಮಾಡುವಾಗ ಕಾಡುಪ್ರಾಣಿಗಳ ಹಾವಳಿ ತಡೆಗೆ ಬೇಲಿಗೆ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶದಿಂದ ಕಾರ್ತಿಕ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆ ತಂದು ಪ್ರಥಮ ಚಿಕಿತ್ಸೆ ಕೊಡಿಸಿ, ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಮೃತ ಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ