*ಹಾಸ್ಟೆಲ್ ನಲ್ಲಿಯೇ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ವಿದ್ಯಾರ್ಥಿಗಳಿಂದ ಲೈಂಗಿಕ ದೌರ್ಜನ್ಯ*

ಪ್ರಗತಿವಾಹಿನಿ ಸುದ್ದಿ: ರ್ಯಾಗಿಂಗ್ ಮಾಡಿದ್ದಕ್ಕೆ ದೂರು ನೀಡಿದಳು ಎಂಬ ಕಾರಣಕ್ಕೆ ಹಾಸ್ಟೇಲ್ ನಲ್ಲಿಯೇ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯವೆಸಗಿ ಚಿತ್ರಹಿಂಸೆ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಬನ್ನೇರುಘಟ್ಟ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿನಿ ಹೊಸದಾಗಿ ಹಾಸ್ಟೆಲ್ ಗೆ ಸೇರಿದ್ದಳು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಆಕೆಗೆ ರ್ಯಾಗಿಂಗ್ ಮಾಡಿದ್ದರು. ಇದರಿಂದ ವಿದ್ಯಾರ್ಥಿನಿ ಪ್ರಾಂಶುಪಾಲರಿಗೆ ದೂರು ಕೊಟ್ಟಿದ್ದಳು.
ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ತಮ್ಮ ವಿರುದ್ಧ ದೂರು ನೀಡಿದ್ದಕ್ಕೆ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯನ್ನು ಹಾಸ್ಟೆಲ್ ರೂಮ್ ನಲ್ಲಿಯೇ ನಾಲ್ಕು ದಿನಗಳ ಕಾಲ ಕೂಡಿ ಹಾಕಿದ್ದಾರೆ. ಲೈಂಗಿಕ ದೌಜನ್ಯವೆಸಗಿದ್ದಾರೆ. ಬಟ್ಟೆ ಬಿಚ್ಚಿಸಿ, ನೃತ್ಯ ಮಾಡಿಸಿ, ಕಬ್ಬಿಣದ ಹ್ಯಾಂಗರ್ ನಿಂದ ಮನಬಂದತೆ ಹಲ್ಲೆ ನಡೆಸಿ ವಿಕೃತಿ ಮೆರೆದಿದ್ದಾರೆ.
ಸಂತ್ರಸ್ತ ವಿದ್ಯಾರ್ಥಿನಿಯ ತಂದೆ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಐವರು ವಿದ್ಯಾರ್ಥಿಗಳು, ಹಾಸ್ಟೆಲ್ ವಾರ್ಡನ್, ಪ್ರಾಂಶುಪಾಲರ ವಿರುದ್ಧ ಎಫ್ಐಆರ್ ದಾಖಲಾಗಿದೆ.