
ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿಗೆ ಇನ್ನೋರ್ವ ವಿದ್ಯಾರ್ಥಿ ಚಾಕು ಇರಿದಿದ್ದು, ಈ ಘಟನೆ ಬೆನ್ನಲ್ಲೇ ಜನರ ಗುಂಪು ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ರಾಜಸ್ಥಾನದ ಉದಯಪುರ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಗಾಯಾಳು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯಾಹ್ನ ಊಟದ ವಿರಾಮದ ವೇಳೆ ವಿದ್ಯಾರ್ಥಿಯೋರ್ವ 15 ವರ್ಷದ ಇನ್ನೋರ್ವ ವಿದ್ಯಾರ್ಥಿಯ ತೊಡೆಯ ಭಾಗಕ್ಕೆ ಚಾಕು ಇರಿದ್ದಿದ್ದಾನೆ. ಘಟನೆ ಬೆನ್ನಲ್ಲೇ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಈ ಘಟನೆ ಕಂಡಿಸಿ ಜನರ ಗುಂಪು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಉದಯಪುರ ಜಿಲ್ಲಾಧಿಕಾರಿಗಳು ಜನರಿಗೆ ಶಾಂತಿಯುತವಾಗಿರುವಂತೆ ಹಾಗೂ ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಮನವಿ ಮಾಡಿದ್ದಾರೆ. ಸದ್ಯ ವಿದ್ಯಾರ್ಥಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ