
ಪ್ರಗತಿವಾಹಿನಿ ಸುದ್ದಿ: ಪ್ರಾಧ್ಯಾಪಕರ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿಯೊಬ್ಬರು ಡೆತ್ ನೋಟ್ ಬರೆದಿ ಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದುದೆ.
ಉತ್ತರ ಪ್ರದೇಶದ ಗ್ರೇಟರ್ ನೊಯ್ಡಾದಲ್ಲಿ ಈ ದುರಣ್ತ ಸಂಭವಿಸಿದೆ. ಜ್ಯೋತಿ ಶರ್ಮಾ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಗ್ರೇಟರ್ ನೊಯ್ಡಾದ ಶಾರದಾ ವಿಶ್ವವಿದ್ಯಾಲಯದಲ್ಲಿ ಮೂರನೇ ವರ್ಷದ ಬಿಡಿಎಸ್ (ಡೆಂಟಲ್) ಕೋರ್ಸ್ ಓದುತ್ತಿದ್ದರು. ಇಬ್ಬರು ಶಿಕ್ಷಕರು ನೀಡುತ್ತಿದ್ದ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟಿದ್ದಾರೆ.
ಶಿಕ್ಷಕರು ನೀಡುತ್ತಿದ್ದ ನಿರಂತರ ಒತ್ತಡ ಹಾಗೂ ಕಿರುಕುಳವೇ ಸಾವಿಗೆ ಕಾರಣ ಎಂದು ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟಿದ್ದು, ಹಾಸ್ಟೆಲ್ ನಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ನಡೆಸಿದ್ದಾರೆ.