Kannada NewsKarnataka NewsLatest

*ಶಾಲೆಯಲ್ಲಿ ಕುಸಿದು ಬಿದ್ದು 8ನೇ ತರಗತಿ ವಿದ್ಯಾರ್ಥಿನಿ ಸಾವು*

ಪ್ರಗತಿವಾಹಿನಿ ಸುದ್ದಿ: ಶಾಲೆಯಲ್ಲಿ ಏಕಾಏಕಿ ಕುಸಿದು ಬಿದ್ದು ೮ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ನಡೆದಿದೆ. ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

Home add -Advt

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಣ್ಣಪ್ಪನಹಟ್ಟಿ ಗ್ರಾಮದಲ್ಲಿ ನಡೆದಿದೆ. ಅಕ್ಷರಾ (14) ಮೃತ ವಿದ್ಯಾರ್ಥಿನಿ. ಶಾಲೆಯಲ್ಲಿ ಏಕಾಏಕಿ ತಲೆ ತಿರುಗಿ ಕುಸಿದು ಬಿದ್ದಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆದರೆ ಚಿಕಿತ್ಸೆ ಫಲಿಸದೇ ಅಕ್ಷರಾ ಮೃತಪಟ್ಟಿದ್ದಾಳೆ. ಮಗಳನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Related Articles

Back to top button