ಪ್ರಗತಿವಾಹಿನಿ ಸುದ್ದಿ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮನೆಯ ಬಾತ್ ರೂಮ್ ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಭುಧ್ಯಾ (21) ಮೃತ ವಿದ್ಯಾರ್ಥಿನಿ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ಓದುತ್ತಿದ್ದ ಪ್ರಭುಧ್ಯಾ, ಮನೆಯ ಬಾತ್ ರೂಮ್ ನಲ್ಲಿ ಕತ್ತುಕುಯ್ದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.
ವಿದ್ಯಾರ್ಥಿನಿಯದ್ದು ಕೊಲೆಯೋ ಆತ್ಮಹಯೆಯೋ ಎಂಬುದು ತನಿಖೆಯಿಂದಲೇ ತಿಳಿದುಬರಬೇಕಿದೆ. ಪೊಲೀಸರು ಯುಡಿಆರ್ ಅಡಿ ಅಸಹಜ ಸಾವು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ವಿದ್ಯಾರ್ಥಿನಿ ಪ್ರಭುಧ್ಯಾ ತಾಯಿ, ತನ್ನ ಮಗಳನ್ನು ಯಾರ್ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಮನೆ ಹಿಂದಿನ ಡೋರ್ ತೆಗೆದುಕೊಂಡಿತ್ತು. ಮಗಳು ಬಾತ್ ರೂಮ್ ನಲ್ಲಿ ಕತ್ತು ಕುಯ್ದ ರೀತಿಯಲ್ಲಿ ಸಾವನ್ನಪ್ಪಿದ್ದಾಳೆ. ನನ್ನ ಮಗಳು ಸಹಿಕ್ಷಣಿಕ ವ್ಯವಸ್ಥೆಯನ್ನು ಪ್ರಶಿಸಿದ್ದಳು. ಇದೇ ಕಾರಣಕ್ಕೆ ಆಕೆಯನ್ನು ಹತ್ಯೆ ಮಡಲಾಗಿದೆ ಎಂದು ಆರೋಪಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ