Kannada NewsKarnataka NewsLatest

*ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆ*

ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿಯೋರ್ವನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದಲ್ಲಿ ನಡೆದಿದೆ.

ಮುತ್ತುರಾಜ್ ಮೃತ ವಿದ್ಯಾರ್ಥಿ. ದುಷ್ಕರ್ಮಿಗಳು ವಿದ್ಯಾರ್ಥಿಯನ್ನು ಕೊಲೆಗೈದು ನೇಣು ಹಾಕಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ದಾಸನಪುರದ ವಸಂತಾ-ರವಿಕುಮಾರ್ ದಂಪತಿಯ ಪುತ್ರ ಮುತ್ತುರಾಜ್.

ಅನ್ಯಕೋಮಿನ ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಕೊಲೆ ಮಾಡಿ, ನೇಣು ಹಾಕಿದ್ದಾಗಿ ಕುಟುಂಬದವರು ಆರೋಪಿಸಿದ್ದಾರೆ. ಯುವತಿಯ ಕಡೆಯವರು ಈ ಕೃತ್ಯವೆಸಗಿದ್ದಾರೆ ಎಂದು ದೂರಿದ್ದಾರೆ.

ಹುಣಸೂರು ಗ್ರಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button