CrimeKannada NewsKarnataka NewsLatestTravel

*ಭೀಕರ ಸರಣಿ ಅಪಘಾತ: ಮೂವರು ಸಾವು*

ಪ್ರಗತಿವಾಹಿನಿ ಸುದ್ದಿ: ಭೀಕರ ಸರಣಿ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ನಡೆದಿದೆ.

ಪಿಕ್‌ಅಪ್ ಜೀಪ್, ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಕುಮಾರ, ರತನ್ ಹಾಗೂ ಆದರ್ಶ್ ಎಂದು ಗುರುತಿಸಲಾಗಿದೆ.

ಡಿಕ್ಕಿ ಸಂಭವಿಸಿದ ಬೆನ್ನಲ್ಲೇ ಹಲವರು ರಸ್ತೆಯ ಮೇಲೆ ಬಿದ್ದು ಸಹಾಯಕ್ಕಾಗಿ ಕೂಗಿಕೊಂಡಿದ್ದಾರೆ. ಗಾಯಾಳುಗಳ ಸ್ಥಿತಿ ಕಂಡು ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ, ಅವರನ್ನು ವಾಹನಗಳಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ನೆರವಿಗೆ ನಿಂತಿದ್ದಾರೆ.

ಘಟನೆಯಲ್ಲಿ ಒಟ್ಟು ಏಳು ಮಂದಿ ಗಾಯಗೊಂಡಿದ್ದು, ಸುವಿನ್, ಚಂದ್ರಶೇಖರ್, ಆದರ್ಶ್ ಹಾಗೂ ಅಜಯ್ ಸೇರಿದಂತೆ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೂರು ವಾಹನಗಳು ಒಂದಕ್ಕೊಂದು ಡಿಕ್ಕಿಯಾಗಲು ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಪಘಾತದಿಂದ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೂ ಅಡ್ಡಿಯುಂಟಾಗಿತ್ತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button