ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆರೆಯಲ್ಲಿ ಈಜಲು ಹೋದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಬೂದಿಗೆರೆ ಗ್ರಾಮದಲ್ಲಿ ನಡೆದಿದೆ.
ಬೆಂಗಳೂರಿನ ಉದಯನಗರದ ನಿವಾಸಿ 18 ವರ್ಷದ ಬಿವಿನ್ ಮೃತ ದುರ್ದೈವಿ. ಶನಿಮಹಾತ್ಮನ ದೇವಾಲಯಕ್ಕೆ ಬಂದ ನಾಲ್ವರು ವಿದ್ಯಾರ್ಥಿಗಳು ಅಲ್ಲಿಯೇ ಕೆರೆ ಬಳಿ ಚಿಕನ್ ಬೇಯಿಸಿ ಸೇವಿಸಿದ್ದರು. ಬಳಿಕ ಕೆರೆಯಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ ಬಿವಿನ್ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಬಿವಿನ್ ಮೃತದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ, ಪೋಷಕರು ಕೆರೆಯಲ್ಲಿ ಹುಡುಕಾಟ ನಡೆಸಿದ್ದಾರೆ.
ನವ ವಿವಾಹಿತೆ ಇಂಜಿನಿಯರ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಪತಿಯ ಮನೆಯವರಿಂದಲೆ ಕೊಲೆ ಶಂಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ