
ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಸಹಪಾಠಿ ವಿದ್ಯಾರ್ಥಿನಿಯ ಮೇಲೆಯೇ 10ನೇ ತರಗತಿಯ ಮೂವರು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ತಮ್ಮದೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಮೂವರು ವಿದ್ಯಾರ್ಥಿಗಳು ಅಟ್ಟಹಾಸ ಮೆರೆದಿದ್ದಾರೆ. ವಿದ್ಯಾರ್ಥಿನಿ ತನ್ನ ಗೆಳೆಯನ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಳು. ಇದನ್ನು ಗಮನಿಸಿದ ಸಹಪಾಠಿಯೊಬ್ಬ ಮನೆಯಲ್ಲಿ ವಿಷಯ ಹೇಳುವುದಾಗಿ ಬೆದರಿಸಿದ್ದಾನೆ. ಇದಕ್ಕೆ ಬಾಲಕಿ ಮನೆಯಲ್ಲಿ ಹೇಳದಂತೆ ಕೇಳಿಕೊಂಡಿದ್ದಾಳೆ.
ಈ ವಿಷಯವನ್ನೇ ಬಂಡವಾಳವನ್ನಾಗಿ ಮಾಡಿಕೊಂಡ ಮೂವರು ವಿದ್ಯಾರ್ಥಿಗಳು ಬಾಲಕಿಯನ್ನು ಬ್ಲ್ಯಾಕ್ ಮೇಲ್ ಮಾಡತೊಡಗಿದ್ದಾರೆ. ಹೈಸ್ಕೂಲಿನ ಸಮೀಪವೇ ಇರುವ ವಿದ್ಯಾರ್ಥಿನಿಯ ಮನೆಗೆ ಯಾರೂ ಇಲ್ಲದ ವೇಳೆ ನುಗ್ಗಿರುವ ಮೂವರು ವಿದ್ಯಾರ್ಥಿಗಳು, ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆಸಿ ಪರಾರಿಯಾಗಿದ್ದಾರೆ.
ಪೋಕ್ಸೋ ಕಾಯ್ದೆಯಡಿ ಮೂವರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮೂವರನ್ನು ಬಂಧಿಸಿದ್ದಾರೆ.
ಮಳೆಯ ಆರ್ಭಟಕ್ಕೆ ಕುಸಿದು ಬಿದ್ದ ಮನೆ ಮೇಲ್ಛಾವಣಿ; ಮಹಿಳೆ ದುರ್ಮರಣ