Kannada NewsKarnataka NewsLatest

*ವಿದ್ಯಾರ್ಥಿನಿ ನೇಹಾ ಹತ್ಯೆ ಕೇಸ್: ಆರೋಪಿ ಸಿಐಡಿ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿಯನ್ನು ಸಿಐಡಿ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ.

Home add -Advt

ಹುಬ್ಬಳ್ಳಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಒಂದನೇ ಜೆ ಎಂ ಎಫ್ ಸಿ ನ್ಯಾಯಾಲಯ ಆರೋಪಿ ಫಯಾಜ್ ನನ್ನು 6 ದಿನಗಳ ಕಾಲ ಸಿಐಡಿ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ.

ಇತ್ತೀಚೆಗಷ್ಟೇ ಹುಬ್ಬಳ್ಳಿ-ಧಾರವಾಡ ಕಾರ್ಪೊರೇಟರ್ ನಿರಂಜನ ಹಿರೇಮಠ ಮಗಳು ನೇಹಾ ಹಿರೇಮಠಳನ್ನು ಬಿವಿಬಿ ಕಾಲೇಜು ಆವರಣದಲ್ಲಿ ದುಷ್ಕರ್ಮಿ ಫಯಾಜ್ ಎಂಬಾತ ಚಾಕುವಿನಿಂದ 10ಕ್ಕೂ ಹೆಚ್ಚು ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ.

ಕೃತ್ಯದ ಒಂದೇ ಗಂಟೆಯಲ್ಲಿ ಆರೋಪಿ ಫಯಾಜ್ ನನ್ನು ವಿದ್ಯಾನಗರ ಠಾಣೆ ಪೊಲಿಸರು ಬಂಧಿಸಿದ್ದರು. ಬಂಧಿತ ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇದೀಗ ಸಿಐಡಿ ಪೊಲೀಸರು 6 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದಾರೆ.


Related Articles

Back to top button