ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಕಾರ್ಪೊರೇಟರ್ ಮಗಳ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬಿವಿಬಿ ಕಾಲೇಜಿನಲ್ಲಿ ಎಂಬಿಎ ಪರೀಕ್ಷೆ ಮುಗಿಸಿ ಹೊರ ಬರುತ್ತಿದ್ದ ಕಾರ್ಪೊರೆಟರ್ ಮಗಳು ನೇಹಾ ಹಿರೇಮಠಳನ್ನು ಅದೇ ಕಾಲೇಜಿನಲ್ಲಿ ಓದುತ್ತಿದ್ದ ಫಯಾಜ್ ಎಂಬ ವಿದ್ಯಾರ್ಥಿ 12 ಬಾರಿ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ. ಬಳಿಕ ಎಸ್ಕೇಪ್ ಆಗಲು ಯತ್ನಿಸಿದ್ದ. ಈ ವೇಳೆ ಪೊಲೀಸರು ಆರೋಪಿ ಫಯಾಜ್ ನನ್ನು ಬಂಧಿಸಿದ್ದರು.
ಬಂಧಿತ ಫಯಾಜ್ ನನ್ನು ಇಂದು ವಿದ್ಯಾನಗರ ಠಾಣೆ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಈ ವೇಳೆ ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ