ಪ್ರಗತಿವಾಹಿನಿ ಸುದ್ದಿ:
ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಬಗ್ಗೆ ಶಿವಮೊಗ್ಗ ಏರ್ ಪೋರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಬೇಕು, ವಿಶೇಷ ನ್ಯಾಯಾಲಯ ಸ್ಥಾಪಿಸಿ ವಿಚರಣೆ ನಡೆಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಹಾಗಾಗಿ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಕಾರ್ಪೊರೆಟರ್ ನಿರಂಜನ ಹಿರೇಮಠ ಅವರ ಮಗಳು ನೇಹಾ ಹಿರೇಮಠಳನ್ನು ಹಾಡಹಗಲೇ ದುಷ್ಕರ್ಮಿ ಚಾಕುವಿನಿಂದ 10 ಬಾರಿ ಇರಿದು ಹತ್ಯೆ ಮಾಡಿದ್ದ. ಘಟನೆ ನಡೆದ ಒಂದು ಗಂಟೆಯೊಳಗಾಗಿ ವಿದ್ಯಾನಗರ ಠಾಣೆ ಪೊಲೀಸರು ಕೊಲೆಗಾರ ಫಯಾಜ್ ನನ್ನು ಬಂಧಿಸಿದ್ದರು. ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ