Kannada NewsKarnataka NewsLatest

*ವಿದ್ಯಾರ್ಥಿನಿ ನೇಹಾ ಹತ್ಯೆ ಕೇಸ್; ಚಾರ್ಜ್ ಶೀಟ್ ಸಲ್ಲಿಸಲು ಎಸ್ಐಟಿ ಸಿದ್ಧತೆ*

ಪ್ರಗತಿವಾಹಿನಿ ಸುದ್ದಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹುಬ್ಬಳ್ಳಿ ಕಲೇಜಿನಲ್ಲಿ ವಿದ್ಯಾರ್ಥಿ ಹತ್ಯೆ ಪ್ರಕರಣದ ತನಿಖೆ ಮುಕ್ತಾಯ ಹಂತಕ್ಕೆ ಬಂದಿದ್ದು, ಎಸ್ಐಟಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ.

Home add -Advt

ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಮಾರ್ಚ್ 18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಫಯಾಜ್ ಎಂಬಾತ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಒಂದು ವಾರದಲ್ಲಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿತ್ತು. 6 ದಿನಗಳ ಕಾಲ ಆರೋಪಿ ಫಯಾಜ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಎಸ್ಐಟಿ ಆತನ ತಂದೆ-ತಾಯಿಯನ್ನು ವಿಚಾರಿಸಿದ್ದರು. ಇದೀಗ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.

Related Articles

Back to top button