ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಯಾವತ್ತೂ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಯನ್ನ ಗಮನದಲ್ಲಿಟ್ಟುಕೊಂಡು ಕೆಲಸಮಾಡುತ್ತದೆ. ಆದ್ದರಿಂದ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ವಿಶ್ವವಿದ್ಯಾಲಯ ಮನವಿ ಮಾಡಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ವಿಟಿಯು, ಪರೀಕ್ಷೆಯ ಬಗ್ಗೆ ರಾಜ್ಯ ಮಟ್ಟದಲ್ಲಿ ತೀರ್ಮಾನ ಆಗುವುದಿದೆ ಹಾಗೂ ಇದರ ಬಗ್ಗೆ ರಾಜ್ಯ ಸರಕಾರವು ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಜೊತೆ ಸಭೆ ನಡೆಸಿ ನಿರ್ದೇಶನಗಳನ್ನು ಜೂನ್ ಮೊದಲ ವಾರದಲ್ಲಿ ಆದೇಶಿಸಬಹುದು ಮತ್ತು ಇದಕ್ಕೆ ಸಂಬಂಧಿಸಿದಂತೆ ಸರ್ಕಾರದ ಆದೇಶ ಬಂದ ನಂತರ ಆದೇಶಕ್ಕನುಗುಣವಾಗಿ ವಿ ತಾ ವಿ ತೀರ್ಮಾನ ತೆಗೆದುಕೊಂಡು ಸುತ್ತೋಲೆ ಹೊರಡಿಸಲಿದೆ ಎಂದು ತಿಳಿಸಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಹಾಗೂ ಪೋಷಕರು ಆಂತಕಗೊಳ್ಳುವುದು ಬೇಡ ಎಂದು ಹೇಳಿದೆ.
ಮುಂದಿನ ಆದೇಶದವರೆಗೂ ಎಲ್ಲ ವಿದ್ಯಾರ್ಥಿಗಳು ತಮ್ಮ ಜ್ಞಾನಾರ್ಜನೆಯನ್ನು ನಿಲ್ಲಿಸದೆ ಆನ್ಲೈನ್ ವೇದಿಕೆಗಳಲ್ಲಿ ಕಲಿಕೆಯನ್ನು ಮುಂದುವರೆಸಬೇಕು. ಈ ನಿಟ್ಟಿನಲ್ಲಿ ವಿ ತಾ ವಿ ಪರೀಕ್ಷೆ, ಶೈಕ್ಷಣಿಕ ವೇಳಾಪಟ್ಟಿ, ಆರೋಗ್ಯ ಈ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶವನ್ನು ಕೊಡಬೇಕೆಂದು ಎಲ್ಲ ಅಧೀನ ಅಭಿಯಾಂತ್ರಿಕ ಮಹಾವಿದ್ಯಾಲಯಗಳಿಗೆ ವಿತಾವಿ ಆದೇಶ ನೀಡಿದೆ ಎಂದು ಹೇಳಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ