Latest

ಮನ್ ಕಿ ಬಾತ್ ಕೇಳದಿದ್ದಕ್ಕೆ ವಿದ್ಯಾರ್ಥಿಗಳಿಗೆ ದಂಡ

ಪ್ರಗತಿವಾಹಿನಿ ಸುದ್ದಿ, ಡೆಹ್ರಾಡೂನ್: ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕಿ ಬಾತ್’ ಕಾರ್ಯಕ್ರಮ ಆಲಿಸಲು ಶಾಲೆಗೆ ಬಾರದ ವಿದ್ಯಾರ್ಥಿಗಳಿಂದ ಡೆಹ್ರಾಡೂನ್ ಶಾಲೆಯೊಂದು 100 ರೂ. ದಂಡ ವಸೂಲಿ ಮಾಡಿರುವ ಆರೋಪ ಕೇಳಿಬಂದಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಭಾನುವಾರ ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ಶಾಲೆಗೆ ಬಾರದ ಮಕ್ಕಳಿಗೆ 100 ರೂ. ದಂಡ ಅಥವಾ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸುವಂತೆ ಡೆಹ್ರಾಡೂನ್‌ನ ಜಿಆರ್‌ಡಿ ನಿರಂಜನ್‌ಪುರ ಅಕಾಡೆಮಿ ಆದೇಶ ಹೊರಡಿಸಿದೆ” ಎಂದು ಆರಿಫ್ ಖಾನ್ ತಿಳಿಸಿದ್ದಾರೆ.

ಡೆಹ್ರಾಡೂನ್‌ನ ಮುಖ್ಯ ಶಿಕ್ಷಣಾಧಿಕಾರಿ ಪ್ರದೀಪ್ ಕುಮಾರ್, ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ಮೂರು ದಿನಗಳಲ್ಲಿ ಪ್ರತಿಕ್ರಿಯೆ ನೀಡಲು ಶಾಲೆಯನ್ನು ಕೇಳಲಾಗಿದೆ. ಶಿಕ್ಷಣ ಇಲಾಖೆ ಶಾಲೆಗೆ ನೋಟಿಸ್ ಜಾರಿ ಮಾಡಿದ್ದು, ಮೂರು ದಿನಗಳಲ್ಲಿ ಉತ್ತರ ನೀಡುವಂತೆ ಸೂಚಿಸಿದೆ.

ಮುಖ್ಯ ಶಿಕ್ಷಣಾಧಿಕಾರಿ ಪ್ರದೀಪ್ ಕುಮಾರ್ ಮಾತನಾಡಿ, “ಶಾಲೆಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ಮೂರು ದಿನದೊಳಗೆ ಶಾಲೆ ತನ್ನ ನಿಲುವು ಮಂಡಿಸದಿದ್ದರೆ ಶಾಲೆಯ ಪರವಾಗಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಿರುವುದು ಗೊತ್ತಾಗುತ್ತದೆ. ಇದಾದ ನಂತರ ಇಲಾಖೆ ಕ್ರಮ ಕೈಗೊಳ್ಳಲಿದೆ” ಎಂದರು.

ಪ್ರಧಾನಿ ನರೇಂದ್ರ ಮೋದಿಯವರ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ಏಪ್ರಿಲ್ 30 ರಂದು 100 ಸಂಚಿಕೆಗಳನ್ನು ಪೂರೈಸಿದೆ. 100 ನೇ ಸಂಚಿಕೆಯಾಗಿ, ದೇಶಾದ್ಯಂತ ಶಾಲೆಗಳು ಸೇರಿದಂತೆ ಹಲವು ಸ್ಥಳಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

https://pragati.taskdun.com/jdsbangalorejanata-manifestovidhanasabha-election/
https://pragati.taskdun.com/vijayapuracorporator-natashhusbandshoot-dead/
https://pragati.taskdun.com/belagavi-fir-against-facebook-accounts-that-spread-fake-news/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button