Kannada NewsKarnataka NewsLatest

ಚಿಕನ್ ಫುಡ್ ಸೇವಿಸಿದ ಕರ್ನಾಟಕದ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಅಸ್ವಸ್ಥ

ಪ್ರಗತಿವಾಹಿನಿ ಸುದ್ದಿ, ಗೋದಾವರಿ (ಆಂಧ್ರಪ್ರದೇಶ): ಕ್ರೀಡಾಕೂಟದಲ್ಲಿ ಭಾಗವಹಿಸಲು ಆಗಮಿಸಿದ್ದ ಕರ್ನಾಟಕದ ವಿವಿಧ ಜಿಲ್ಲೆಗಳ ನವೋದಯ ಶಾಲೆ ವಿದ್ಯಾರ್ಥಿಗಳು ಚಿಕನ್ ಫುಡ್ ಸೇವಿಸಿ ಅಸ್ವಸ್ಥರಾಗಿದ್ದಾರೆ.

ಆಂಧ್ರ ಪ್ರದೇಶದ ವೆಸ್ಟ್ ಗೋದಾವರಿ ಜಿಲ್ಲೆಯ ಪೆದವೇಗಿಯಲ್ಲಿ ವಿದ್ಯಾರ್ಥಿಗಳ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ. ಪಂದ್ಯದಲ್ಲಿ ಭಾಗವಹಿಸಲು ರಾಜ್ಯದ ಬೆಳಗಾವಿ, ರಾಯಚೂರು, ಕೊಪ್ಪಳ, ವಿಜಯಪುರ, ಬೆಂಗಳೂರು, ಮಡಿಕೇರಿ ಭಾಗದ ನವೋದಯ ಶಾಲೆಗಳ ವಿದ್ಯಾರ್ಥಿಗಳು ಆಗಮಿಸಿದ್ದರು.

Home add -Advt

ಚಿಕನ್ ಫುಡ್ ಸೇವಿಸಿದ ವಿದ್ಯಾರ್ಥಿಗಳಲ್ಲಿ ಅನೇಕರು ಅಸ್ವಸ್ಥಗೊಂಡರು. ಎಲ್ಲ ವಿದ್ಯಾರ್ಥಿಗಳಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಫುಡ್ ಪೊಯ್ಸನ್ ನಿಂದ ಸಮಸ್ಯೆಯಾಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ.

Related Articles

Back to top button