Kannada NewsKarnataka NewsLatest

*ಶಾಲೆಗೆ ಹೋಗಿದ್ದ ಇಬ್ಬರು ವಿದ್ಯಾರ್ಥಿನಿಯರು ಇದ್ದಕ್ಕಿದ್ದಂತೆ ನಾಪತ್ತೆ*

ಪ್ರಗತಿವಾಹಿನಿ ಸುದ್ದಿ: ಶಾಲೆಗೆ ಹೋಗಿದ್ದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರದ ನರಸಾಪುರ ಗ್ರಾಮದ ಶರಣ್ಯಾ ಹಾಗೂ ದೇವಿ ನಾಪತ್ತೆಯಾಗಿರುವ ವಿದ್ಯಾರ್ಥಿನಿಯರು. ನಿನ್ನೆ ಬೆಳಿಗ್ಗೆ ಶಾಲೆಗೆ ಹೋಗಿದ್ದ ವಿದ್ಯಾರ್ಥಿನಿಯರು ಇಂದು ಸಂಜೆಯಾದರೂ ಮನೆಗೆ ವಾಪಾಸ್ ಆಗಿಲ್ಲ. ಅತ್ತ ಶಾಲೆಗೀ ಹೋಗಿಲ್ಲ ಎಂದು ತಿಳಿದುಬಂದಿದೆ.

ಇಬ್ಬರು ವಿದ್ಯಾರ್ಥಿನಿಯರು ಹತ್ತನೇ ತರಗತಿ ಓದುತ್ತಿದ್ದರು. ಆತಂಕಗೊಂಡಿರುವ ಪೋಷಕರು ಕೋಲಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿದ್ಯಾರ್ಥಿನಿಯರ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button