Kannada NewsKarnataka NewsLatest

ಬಸ್ ತಡೆದು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು; ಸುಮಾರು 15ಕ್ಕೂ ಹೆಚ್ಚು ಬಸ್ ಗಳಿಗೆ ತಡೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಾಲೂಕಿನ ಹುದಲಿ ಗ್ರಾಮದಲ್ಲಿ ಕಳೆದ 1ಗಂಟೆಯಿಂದ  ಬಸ್ ಗಾಗಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದಾರೆ.

ಬಸ್ ಅನಾನುಕೂಲತೆಯಿಂದ ಬೇಸತ್ತ ವಿದ್ಯಾರ್ಥಿಗಳು ತಾಳ್ಮೆ ಕಳೆದುಕೊಂಡು ಪ್ರತಿಭಟನೆಗಿಳಿದಿದ್ದು ಬಸ್ ತಡೆ ಹಿಡಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೇವಲ ವಿದ್ಯಾರ್ಥಿಗಳಿಗಷ್ಟೇ ಅಲ್ಲದೆ ನಿತ್ಯ ಪ್ರಯಾಣಿಸುವ ನೌಕರರು, ಆಸ್ಪತ್ರೆಗಳಿಗೆ ಹೋಗುವ ರೋಗಿಗಳೂ ಅನಾನುಕೂಲತೆ ಎದುರಿಸುತ್ತಿದ್ದಾರೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

Home add -Advt

 

ಸುಮಾರು 15 ಬಸ್ಸುಗಳನ್ನು ತಡೆಹಿಡಿದಿರುವ ವಿದ್ಯಾರ್ಥಿಗಳು ಸ್ಥಳಕ್ಕೆ ಕೆಎಸ್ ಆರ್ ಟಿಸಿ ಡಿಸಿ ಸ್ಥಳಕ್ಕೆ ಬರಬೇಕೆಂದು ಪಟ್ಟುಹಿಡಿದಿದ್ದಾರೆ.

ಪ್ರತಿಭಟನೆಯಿಂದಾಗಿ ಇತರ ಪ್ರಯಾಣಿಕರು, ಕಚೇರಿಗಳಿಗೆ ಹೋಗುವ ನೌಕರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪರಮೋಚ್ಚಪ್ರದ ಸಾಹಿತ್ಯದ ಪರಮ ಕವಿ ಪಂಪ

Related Articles

Back to top button