Latest

ಸಂಸದ ಡಿ.ಕೆ. ಸುರೇಶ್ ಮೊದಲ ಪ್ರತಿಕ್ರಿಯೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡಿ.ಕೆ.ಶಿವಕುಮಾರ್ ಹಾಗೂ ತಮ್ಮ ಮನೆಯ ಮೇಲೆ ನಡೆದಿರುವ ಸಿಬಿಐ ದಾಳಿ ವಿಚಾರವಾಗಿ ಹೇಳಿಕೆ ನೀಡಿರುವ ಸಂಸದ ಡಿ.ಕೆ ಸುರೇಶ್, ಈ ಎಲ್ಲಾ ರಾಜಕೀಯ ಷಡ್ಯಂತ್ರಗಳನ್ನು ಎದುರಿಸಿ ಜಯಿಸಿ ಬರುವ ಶಕ್ತಿಯನ್ನು ಆ ದೇವರು ನಮಗೆ ಕರುಣಿಸಿದ್ದಾನೆ ಎಂದಿದ್ದಾರೆ.

ಸರಣಿ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಹರಿಹಾಯ್ದಿರುವ ಡಿ.ಕೆ ಸುರೇಶ್, ಅಭಿಮಾನಿಗಳು ವಿಚಲಿತರಾಗುವುದು ಬೇಡ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು. ರಾಜಕೀಯವನ್ನು ರಾಜಕೀಯವಾಗಿ ಎದುರಿಸಲು ನಾವು ಸದಾ ಸಿದ್ದರಿದ್ದೇವೆ ಎಂದು ಹೇಳಿದ್ದಾರೆ.

ಇಂದು ಮುಂಜಾನೆಯ ವೇಳೆಗೆ ನಮ್ಮ ಮನೆಯ ಮೇಲೆ ಸಿಬಿಐ ದಾಳಿ ನಡೆದಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣವಾದ ಸ್ಪಂದನೆ ಸಿಕ್ಕಿದೆ. ಮುಂದೆಯೂ ಸಹ ಸಿಗಲಿದೆ ಎಂದು ತಿಳಿಸಿದ್ದಾರೆ.

Home add -Advt

Related Articles

Back to top button