ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 9 ಹಾಗೂ 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಮಹತ್ವದ ಆದೇಶ ಹೊರಡಿಸಿದೆ.
9ನೇ ತರಗತಿ ಮಕ್ಕಳ ಕಲಿಕಾ ದೃಷ್ಟಿಯಿಂದ ಮಕ್ಕಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಹಾಗೂ 11ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸುವಂತೆ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಖಾಸಗಿ ಶಾಲೆಗಳಿಗೂ ಶಿಕ್ಶಣ ಇಲಾಖೆ ಸೂಚನೆ ನೀಡಿದೆ.
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಈ ಆದೇಶ ನೀಡಿದ್ದು, 2023-24ನೇ ಸಾಲಿನಿಂದಲೇ ಬೋರ್ಡ್ ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ