
ಪ್ರಗತಿವಾಹಿನಿ ಸುದ್ದಿ: 9ನೇ ತರಗತಿ ವಿದ್ಯಾರ್ಥಿನಿ ಪ್ರಾಥಮಿಕ ಶಾಲೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ನಲ್ಲಿ ನಡೆದಿದೆ.
ಶಿಕ್ಷಕ ಹಲವು ದಿನಗಳಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ, ಅಲ್ಲದೇ ವಿಷಯ ಯಾರ್ಗಾದರೂ ಹೇಳಿದರೆ ಕೊಲೆಗೈಯ್ಯುವುದಾಗಿ ಬೆದರಿಕೆ ಹಾಕಿದ್ದ. ಶಿಕ್ಷಕನ ಹಿಂಸೆಗೆ ಬೇಸತ್ತು ಬೆದರಿದ ವಿದ್ಯಾರ್ಥಿನಿ ಶಾಲೆಗೆ ಹೋಗುವುದನ್ನೇ ನಿಲ್ಲಿಸಿದ್ದಳು.
ತಾನು ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದಿದ್ದಳು. ಪೋಷಕರು ವಿದ್ಯಾರ್ಥಿನಿಯನ್ನು ಸಮಾಧಾನದಿಂದ ವಿಚಾರಿಸಿದಾಗ ಶಿಕ್ಷಕ ತನಗೆ ಕಿರುಕುಳ ನಿಡುತ್ತಿರುವುದಾಗಿ ಹಾಗೂ ಬೆದರಿಕೆ ಹಾಕಿದ್ದಾಗಿ ಬಾಯ್ಬಿಟ್ಟಿದ್ದಾಳೆ. ಮೊದಲು ಪೋಷಕರು ಶಾಲಾ ಆಡಳಿತ ಮಂಡಳಿ, ಮುಖ್ಯಶಿಕ್ಷಕರಿಗೆ ದೂರು ನೀಡದ್ದರು. ಆದರೂ ಶಿಕ್ಷಕನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಅಂತಿಮವಾಗಿ ಬಾಲಕಿಯ ತಂದೆ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ.