ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ತಾಲೂಕಿನ ದಾಸನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಪ್ರಕಾಶ್ ಅಮಾನತುಗೊಂಡವರು. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ಪೋಷಕರು ಮುಖ್ಯ ಶಿಕ್ಷಕನ ವಿರುದ್ಧ ದೂರು ನೀಡಿದ್ದರು.
ವಿದ್ಯಾರ್ಥಿನಿಯರ ಮೈ ಕೈ ಮುಟ್ಟಿ ಮಾತನಾಡಿಸುವುದು, ಅಸಭ್ಯವಾಗಿ ವರ್ತಿಸುವುದು ಮಾಡುತ್ತಿದ್ದ. ಪ್ರಕರಣ ಸಂಬಂಧ ಪೋಕ್ಸೋ ಕೇಸ್ ನಡಿ ಪ್ರಕರಣ ದಾಖಲಿಸಿಕೊಂಡು ಶಿಕ್ಷಕನನ್ನು ವಜಾಗೊಳಿಸಲು ಡಿಡಿಪಿಐ ಸೂಚಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ