Belagavi NewsBelgaum NewsKarnataka News

*ಚಿಕ್ಕೋಡಿ: ಕಾಮುಕ ಶಿಕ್ಷಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಶಿಕ್ಷಕನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ.

Home add -Advt

ಚಿಕ್ಕೋಡಿಯ ಸರ್ಕಾರಿ ಶಾಲೆಯ ಶಿಕ್ಷಕನಾಗಿರುವ ಆರೋಪಿ, ವಿದ್ಯಾರ್ಥಿನಿಯರಿಗೆ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ. ಸದ್ಯ ಅರೋಪಿ ಶಿಕ್ಷಕ ಸಾದಿಕ್ ಬೇಗ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಕಾಮುಕ ಶಿಕ್ಷಕ ವಿದ್ಯಾರ್ಥಿನಿಯರಿಗೆ ಕಿರುಕುಳ ನಿಡುತ್ತಿದ್ದ, ಶೌಚಕ್ಕೆ ಹೋಗಿದ್ದಾಗ ಪ್ರೈವೆಟ್ ಪಾರ್ಟ್ಸ್ ಫೋಟೋ ತೆಗೆದುಕೊಂಡು ಬರುವಂತೆ ಒತ್ತಾಯಿಸುತ್ತಿದ್ದ. ಫೋಟೋಗಳನ್ನು ಮೊಬೈಲ್ ನಲ್ಲಿ ಸೇವ್ ಮಾಡಿಕೊಂಡು ವಿಕೃತಿ ಮೆರೆಯುತ್ತಿದ್ದ. ಶಿಕ್ಷಕನ ಹಿಂಸೆಗೆ ನೊಂದ ವಿದ್ಯಾರ್ಥಿನಿಯರು ಪೋಷಕರಿಗೆ ತಿಳಿಸಿದ್ದಾರೆ.

ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಮೇಲೆ ಕಳೆದ ಒಂದು ವರ್ಷದಿಂದ ಶಿಕ್ಷಕ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಓರ್ವ ಬಾಲಕಿ ತನ್ನ ತಾಯಿಗೆ ವಿಷಯ ಹೇಳಿದ್ದು, ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶುಕ್ರವಾರ ಬಾಲಕಿಯೊಬ್ಬಳು ಅಳುತ್ತಾ ಮನೆಗೆ ಬಂದಿದ್ದಾಳೆ. ಈ ವೇಳೆ ತಾಯಿ ವಿಚಾರಿಸಾದ ಶಿಕ್ಷಕನ ಕಿರುಕುಳ ಬೆಳಕಿಗೆ ಬಂದಿದೆ. ಕಾಮುಕ ಶಿಕ್ಷಕನ ವಿಕೃತಿಗೆ ಪೊಲೀಸರು ಶಾಕ್ ಆಗಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕೋಡಿ ಪೊಲೀಸರು ಕಾಮುಕ ಶಿಕ್ಷಕನನ್ನು ಬಂಧಿಸಿದ್ದಾರೆ.


Related Articles

Back to top button