Kannada NewsKarnataka NewsLatest

*ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಇಬ್ಬರು ಶಿಕ್ಷಕರು ಅಮಾನತು*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸೊಪ್ಪಿನಕೇರಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಶಾಲೆಯ ಮುಖ್ಯ ಶಿಕ್ಷಕ ನಾಗರಾಜ್ ಕೋರಿ, ಸಹ ಶಿಕ್ಷಕ ಶಾಂತಕುಮಾರ್ ಅಮಾನತುಗೊಂಡವರು.

Home add -Advt

ಶಿಕ್ಷಕ ಶಾಂತಕುಮಾರ್ ವಿರುದ್ಧ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮುಖ್ಯಶಿಕ್ಷಕರಿಗೆ ದೂರು ನೀಡಿದರೂ ಗಂಭೀರವಾಗಿ ಪರಿಗಣಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪವೆಸಗಿದ ಆರೋಪದಲ್ಲಿ ಮುಖ್ಯ ಶಿಕ್ಷಕ ನಾಗರಾಜ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

Related Articles

Back to top button