
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಪರೀಕ್ಷೆಗಳು ಆರಂಭವಾಗಿದ್ದು, ಮತ್ತೊಂದೆಡೆ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚುತ್ತಿದ್ದು, ಜನರು ತತ್ತರಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಶಾಲಾಮಕ್ಕಳಿಗೆ ಬೇಗನೇ ಪರೀಕ್ಷೆಗಳನ್ನು ಮುಗಿಸಿ ಅವಧಿಗೂ ಮುನ್ನವೇ ಬೇಸಿಗೆರಜೆ ಘೋಷಣೆ ಮಾಡುವ ಸಾಧ್ಯತೆ ಇದೆ.
ಈಗಾಗಲೇ ಹವಾಮಾನ ಇಲಾಖೆ ಬಹುತೇಕ ಜಿಲ್ಲೆಗಳಲ್ಲಿ ಬೇಸಿಗೆ ಮುನ್ನವೇ ತಾಪಮಾನ ಏರಿಕೆ ಎಚ್ಚರ್ಕೆ ನೀಡಿದೆ. ಸಾಮಾನ್ಯವಗೈ ಶಾಲಾ ಮಕ್ಕಳಿಗೆ ಏರ್ಪ್ರಿಲ್ ನಿಂದ ಬೇಸಿಗೆ ರಜೆ ನೀಡಲಾಗುತ್ತದೆ. ಆದರೆ ಈ ಬಾರಿ ರಜ್ಯಾದ್ಯಂತ ಬೇಸಿಗೆಗೆಗೂ ಮುನ್ನ ತಾಪಮಾನ ಹೆಚ್ಚುತ್ತಿದ್ದು, ಅವಧಿಗೂ ಮುನ್ನವೇ ಈ ಬಾರಿ ಶಾಲೆಗಳಿಗೆ ರಜೆ ನೀಡುವ ಸಾಧ್ಯತೆ ಇದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ 2025ರ ಏಪ್ರಿಲ್ ಗೂ ಮುನ್ನವೇ ರಣಭೀಕರ ಬಿಸಿಲು ಶುರುವಾಗಿದ್ದು, ಮನೆಯಿಂದ ಹೊರಬರಾಲಗದಷ್ಟು ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಶಾಲೆಗಳಿಗೆ ಹೋಗ ವಿದ್ಯಾರ್ಥಿಗಳ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರ್ವ ಸಾಧ್ಯತೆ ಇದೆ ಈ ನಿಟ್ಟಿನಲ್ಲಿ ರಜೆ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ