
ಪ್ರಗತಿವಾಹಿನಿ ಸುದ್ದಿ: ಮೆಟ್ರಿಕ್ ನಂತರದ ಕೋರ್ಸುಗಳ ವಿದ್ಯಾರ್ಥಿವೇತನಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಪಿಯುಸಿ ಹೊರತುಪಡಿಸಿ ಇನ್ನುಳಿದ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ವಿಸ್ತರಿಸಲಾಗಿದೆ.
ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ‘ಶುಲ್ಕ ಮರುಪಾವತಿ’ ಮತ್ತು ‘ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ’ಯ ಸೌಲಭ್ಯಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆ ದಿನಾಂಕವನ್ನು ನವೆಂಬರ್ 30 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ. ಅರ್ಹ ವಿದ್ಯಾರ್ಥಿಗಳು ಈ ವಿಸ್ತರಿತ ದಿನಾಂಕದ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




