Kannada NewsKarnataka NewsLatest

*ಶಿಕ್ಷಕಿ ಬೈದಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ*

ಪ್ರಗತಿವಾಹಿನಿ ಸುದ್ದಿ: ಶಿಕ್ಷಕಿ ಬೈದರು ಎಂಬ ಕಾರಣಕ್ಕೆ ಮನನೊಂದ 8ನೇ ತರಗತಿ ವಿದ್ಯಾರ್ಥಿನಿಯೋರ್ವಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮರಸೂರು ಮಡಿವಾಳದಲ್ಲಿ ಈ ಘಟನೆ ನಡೆದಿದೆ. ಮರಸೂರು ಶಾಲೆಯ ವಿಧ್ಯಾರ್ಥಿನಿ ಮಧುಶ್ರೀ ಮೃತ ದುರ್ದೈವಿ. ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿನಿ ಬರೆದ ಡೆತ್​​ನೋಟ್​​ ಕೂಡ ಲಭ್ಯವಾಗಿದೆ. ಇದರಲ್ಲಿ ಹಲವು ವಿಚಾರಗಳನ್ನು ಆಕೆ ಉಲ್ಲೇಖಿಸಿದ್ದಾಳೆ. ಶಾಲೆಯಲ್ಲಿ ನಡೆದ ಘಟನೆ ತನಗೆ ಬಹಳ ನೋವು ತಂದಿದೆ. ತನ್ನ ಮೇಲೆ ಇಲ್ಲಸಲ್ಲದ ಅಪರಾಧವನ್ನ ಹೊರಿಸಿದ್ದಾರೆ. ಈ ಅವಮಾನವನ್ನು ಸಹಿಸಿಕೊಂಡು ಬದುಕಲು ತನ್ನಿಂದ ಆಗುತ್ತಿಲ್ಲ. ಮನಸ್ಸಿಗೆ ತೀವ್ರ ನೋವಾಗಿರುವ ಕಾರಣ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾಳೆ.

ಈ ವಿಚಾರದಲ್ಲಿ ಅಮ್ಮ, ಅಕ್ಕ, ತಂಗಿ ಮತ್ತು ತಮ್ಮ ಯಾರದ್ದು ಕೂಡ ತಪ್ಪಿಲ್ಲ. ಅವರನ್ನು ಚೆನ್ನಾಗಿ ನೋಡಿಕೊಳ್ಳಿ. ಅಮ್ಮನನ್ನು ಯಾರು ಕೂಡ ಬೈಯ್ಯಬೇಡಿ. ತನಗೆ ಈ ಭೂಮಿ ಮೇಲೆ ಬದುಕಲು ಆರ್ಹತೆ ಇಲ್ಲ. ಅಮ್ಮ ಮತ್ತು ಎಲ್ಲರೂ ನನ್ನನ್ನ ಕ್ಷಮಿಸಿ ಎಂದು ವಿಧ್ಯಾರ್ಥಿನಿ ಡೆತ್​​ನೋಟ್​​ನಲ್ಲಿ ಉಲ್ಲೇಖಿಸಿದ್ದಾಳೆ. ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

Related Articles

Back to top button