Kannada NewsKarnataka NewsLatest

*ಅಪಾರ್ಟ್ ಮೆಂಟ್ ನಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ*


ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಜಿಗಿದು ವಿದಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ.

17 ವರ್ಷದ ವಿಜಯಲಕ್ಷ್ಮೀ ಆತ್ಮಹತ್ಯೆಗೆ ಶರಣಾದ ಯುವತಿ. ಮೃತ ಯುವತಿ ಖಾಸಗಿ ಕಾಲೇಜಿನಲ್ಲಿ ಬಿ.ಕಾಂ ಓದುತ್ತಿದ್ದಳು. ತಂದೆ-ತಾಯಿ ವಿಚ್ಛೇದನದ ಬಳಿಕ ತಾಯಿ ಯಶೋದಾ ಜೊತೆ ಜ್ಞಾನಭಾರತಿಯ ಜ್ಞಾನಜ್ಯೋತಿನಗರದಲ್ಲಿ ವಾಸವಾಗಿದ್ದಳು.

Home add -Advt

ಸೆ.19ರಂದು ಕಾಲೇಜಿಗೆ ಹೋಗುವುದಾಗಿ ಹೇಳಿ ಹೊರಟಿದ್ದ ವಿಜಯಲಕ್ಷ್ಮೀ ವಾಪಸ್ ಮನೆಗೆ ಬಂದಿರಲಿಲ್ಲ. ಒಂದು ದಿನದ ಬಳಿಕ ತಾಯಿ ಜ್ಞಾನಭಾರತಿ ಪೊಲೀಸ್ ಠಾಣೆಗೆ ಬಂದು ದೂರು ನೀಡಲು ಮುಂದಾಗಿದ್ದಾರೆ. ಈ ವೇಳೆ ಮಗಳು ಅಪಾರ್ಟ್ ಮೆಂಟ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಇನ್ನು ಯುವತಿ ಸಾವಿಗೂ ಮುನ್ನ ಮಂಗಳೂರಿಗೆ ತೆರಳಿದ್ದಳು ಎಂಬ ಮಾಹಿತಿ ಲಭ್ಯವಾಗಿದ್ದು, ಯುವತಿ ಮಂಗಳೂರಿಗೆ ಯಾಕೆ ತೆರಳಿದ್ದಳು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.


Related Articles

Back to top button