Kannada NewsKarnataka NewsLatest
*ಪರೀಕ್ಷೆ ನಡೆಯುತ್ತಿದ್ದಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿಯೋರ್ವ ಕಟ್ಟಡದಿಂದ ಜಿಗಿದು ಆಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ್ ನಲ್ಲಿ ನಡೆದಿದೆ.
ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪರೀಕ್ಷ ಅಭೀತಿಯಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. 19 ವರ್ಷದ ಸತ್ಯಂ ಸುಮನ್ ಮೃತ ವಿದ್ಯಾರ್ಥಿ.
ಪರೀಕ್ಷೆ ನಡೆಯುತ್ತಿದ್ದಾಗಲೇ ಪರೀಕ್ಷಾ ಹಾಲ್ ನಿಂದ ಹೊರ ಬಂದ ವಿದ್ಯಾರ್ಥಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮಣಿಪಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


