Karnataka News
*ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ: ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಅಡೂರು ಗ್ರಾಮದಲ್ಲಿ ನಡೆದಿದೆ.
19 ವರ್ಷದ ಮನುಷ್ ಮೃತ ವಿದ್ಯಾರ್ಥಿ. ಈತ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸರ್ಕಾರಿ ಪದವಿ ಕಾಲೇಜಿನಲ್ಲಿ ಬಿಎ ಓದುತ್ತಿದ್ದ. ಸೆಮಿಸ್ಟರ್ ನಲ್ಲಿ ಒಂದು ವಿಷಯದಲ್ಲಿ ಫೇಲ್ ಆಗಿದ್ದಕ್ಕೆ ದುಡುಕಿನ ನಿರ್ಧಾರ ಕೈಗೊಂಡು ಕೊಳೆನಾಶಕ ಸೇವಿಸಿದ್ದ. ತೀವ್ರ ಅಸ್ವಸ್ತನಾಗಿದ್ದ ವಿದ್ಯಾರ್ಥಿಯನ್ನು ಕುಟುಂಬದವರು ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾನೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘತನೆ ನಡೆದಿದೆ.


