
ಪ್ರಗತಿವಾಹಿನಿ ಸುದ್ದಿ: ಹಾಸ್ಟೇಲ್ ನಲ್ಲಿಯೇ ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದಲ್ಲಿ ನಡೆದಿದೆ.
16 ವರ್ಷದ ಭಾಗ್ಯಶ್ರೀ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ. ಪರೀಕ್ಷೆ ಒತ್ತಡದಿಂದ ವಿದ್ಯಾರ್ಥಿನಿ ನೇಣಿಗೆ ಕೊರಳೊಡ್ಡಿರುವ ಶಂಕೆ ವ್ಯಕ್ತವಾಗಿದೆ.
ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ