*ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು 80ನೇ ಸ್ವಾತಂತ್ರ್ಯೋತ್ಸವದ ತಮ್ಮ ಭಾಷಣದಲ್ಲಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ.
• 2047ರ ವೇಳೆಗೆ ಕರ್ನಾಟಕದ ಆರ್ಥಿಕತೆಯನ್ನು 3 ಟ್ರಿಲಿಯನ್ ಡಾಲರ್ ಕೊಂಡೊಯ್ಯುವ ಗುರಿ.
• ಎಲ್ಲ ಶಾಲೆಗಳಲ್ಲಿ 6ನೇ ತರಗತಿಯಿಂದ ಎಐ ಶಿಕ್ಷಣ ಪರಿಚಯ.
• ‘ಎಐ ಅಕ್ಷರ ಅಭಿಯಾನ’ ಮತ್ತು ‘ಕೋಡಿಂಗ್ ಗುರುಕುಲ’ ಆರಂಭ.
• ದೇಶದ ಪ್ರಪ್ರಥಮ ಸರ್ಕಾರಿ ಸ್ವಾಮ್ಯದ AI ವಿಶ್ವವಿದ್ಯಾಲಯ ಬೆಂಗಳೂರಿನಲ್ಲಿ ಸ್ಥಾಪನೆ.
• ರಾಜ್ಯದ ವಿವಿಧೆಡೆ ಎಐ ಹಬ್ ಗಳ ಸ್ಥಾಪನೆ.
• ‘ಮುಖ್ಯಮಂತ್ರಿ ಉದ್ಯೋಗ ಸಂಕಲ್ಪ’ ಯೋಜನೆ ಆರಂಭ.
• ಸರ್ಕಾರಿ ವಲಯದ 72,000 ಪ್ರಮುಖ ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭ. ಮುಂದಿನ ಆರು ತಿಂಗಳಲ್ಲಿ ಎಲ್ಲಾ ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ.
• ಯುವಕರಿಗಾಗಿ ‘ಯುವ ಉದ್ಯೋಗ ಸೇತು’ ಯೋಜನೆ.
• ‘ಉದ್ಯೋಗ ನಿಧಿ’ ಯೋಜನೆ ಮೂಲಕ ಹಿಂದುಳಿದ ಜಿಲ್ಲೆಗಳಲ್ಲಿ ಉದ್ಯೋಗ ಸೃಷ್ಟಿಗೆ ಪ್ರೋತ್ಸಾಹ.
• ಪ್ರತಿ ಹೊಸ ಉದ್ಯೋಗಕ್ಕೆ ತಿಂಗಳಿಗೆ ₹2,500 ಪ್ರೋತ್ಸಾಹಧನ.
• ಮುಂದಿನ ಎರಡು ವರ್ಷಗಳಲ್ಲಿ 1 ಲಕ್ಷ ಹೊಸ ಉದ್ಯೋಗಗಳ ಸೃಷ್ಟಿ ಗುರಿ.
• ರೈತರಿಗಾಗಿ ‘ಮುಖ್ಯಮಂತ್ರಿ ರೈತ ಚೈತನ್ಯ’ ಯೋಜನೆ.
• ಡ್ರೋನ್ ಮತ್ತು ಉಪಗ್ರಹದ ಮೂಲಕ ಬೆಳೆ ಸಮೀಕ್ಷೆ ಹಾಗೂ ನೈಜ ಸಮಯದ ಮಾಹಿತಿ.
• ಸಣ್ಣ ರೈತರಿಗಾಗಿ ‘ರೈತ ಮಿತ್ರ’ ಕಾರ್ಯಕ್ರಮ.
• 3 ಎಕರೆ ಅಥವಾ ಕಡಿಮೆ ಭೂಮಿ ಹೊಂದಿರುವ ರೈತರಿಗೆ ಕೃಷಿ ಯಂತ್ರೋಪಕರಣಗಳ ಬಾಡಿಗೆ ಶುಲ್ಕದಲ್ಲಿ 50% ಸಹಾಯಧನ.
• ದೊಡ್ಡಬಳ್ಳಾಪುರದಲ್ಲಿ ಅಡ್ವಾನ್ಸ್ ಮ್ಯಾನುಫ್ಯಾಕ್ಚರ್ ಕ್ಲಸ್ಟರ್ ಸ್ಥಾಪನೆ.
• ₹20,000 ಕೋಟಿ ಹೂಡಿಕೆ ಹಾಗೂ ಸುಮಾರು 1 ಲಕ್ಷ ಉದ್ಯೋಗಗಳ ಸೃಷ್ಟಿ ಗುರಿ.
• ‘ಬಿಯಾಂಡ್ ಬೆಂಗಳೂರು’ ಅಡಿಯಲ್ಲಿ ಐದು ಜಾಗತಿಕ ತಂತ್ರಜ್ಞಾನ ಕೇಂದ್ರಗಳ ಸ್ಥಾಪನೆ.
• ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ‘ಸಹಾಯ ಹಸ್ತ’ ಯೋಜನೆ.
• ಗ್ರಾಮೀಣ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ ಗಳಲ್ಲಿ 7.5% ಮೀಸಲಾತಿ.
• ರಾಜ್ಯದ ಪ್ರತಿಯೊಂದು ಪಟ್ಟಣ ಮತ್ತು ನಗರದಲ್ಲಿ ರಿಂಗ್ ರಸ್ತೆ ಹಾಗೂ ಮೊಬಿಲಿಟಿ ಗ್ರಿಡ್ ಅಭಿವೃದ್ಧಿ.
• ಬೆಂಗಳೂರು ಬಿಸಿನೆಸ್ ಕಾರಿಡಾರ್ – 117 ಕಿ.ಮೀ. ರಿಂಗ್ ರಸ್ತೆ ಯೋಜನೆಗೆ ಚಾಲನೆ.
• ಬೆಂಗಳೂರಿನಲ್ಲಿ ಐದು ಹೊಸ ಕಮಿಷನರೇಟ್ ಗಳ ಸ್ಥಾಪನೆ.
• ಬೆಂಗಳೂರಿನಲ್ಲಿ ರೌಡಿ ನಿಗ್ರಹ ಪಡೆ ರಚನೆ.
• ಬೆಂಗಳೂರಿನಲ್ಲಿ ಐದು ಬೃಹತ್ ವೃಕ್ಷೋಧ್ಯಾನ (ಟ್ರೀ ಪಾರ್ಕ್) ನಿರ್ಮಾಣ.
• ಬೆಂಗಳೂರಿನ ಏಳು ಪ್ರಮುಖ ಕೆರೆಗಳ ಅಭಿವೃದ್ಧಿ.
• ವಾಹನ ಮಾಲೀಕರಿಗೆ ಸರಳ ವಿಮಾ ಸೇವೆಗಾಗಿ ಕರ್ನಾಟಕ ರಾಜ್ಯ ಮೋಟಾರು ವಾಹನ ವಿಮಾ ಸಂಸ್ಥೆ ಸ್ಥಾಪನೆ.
• ಜನರ ಸಮಸ್ಯೆಗಳಿಗೆ ಸ್ಪಂದಿಸಲು ಪ್ರಜಾಸೇವೆ ಇಲಾಖೆ ಸ್ಥಾಪನೆ.
• ಮೇಕೆದಾಟು ಯೋಜನೆ ಆರಂಭಿಸುವ ಘೋಷಣೆ.
• 112 ಪ್ರಮುಖ ಜಲಸಂಪನ್ಮೂಲ ಯೋಜನೆಗಳಿಗೆ ₹16,000 ಕೋಟಿ ಅನುಮೋದನೆ.
• ಭೂ-ಗ್ಯಾರಂಟಿ ಮೂಲಕ ಆಸ್ತಿ ಮಾಲೀಕತ್ವದ ಗೊಂದಲಕ್ಕೆ ಪರಿಹಾರ.
• ಇ-ಖಾತಾ ವ್ಯವಸ್ಥೆ ಮೂಲಕ ಆಸ್ತಿ ದಾಖಲೆಗಳ ಡಿಜಿಟಲೀಕರಣ.



