Latest

*ರೈಲಿಗೆ ಸಿಲುಕಿದ ಕಾಲೇಜು ವಿದ್ಯಾರ್ಥಿನಿ: ಸಾವು-ಬದುಕಿನ ನಡುವೆ ಹೋರಾಟ*

ಪ್ರಗತಿವಾಹಿನಿ ಸುದ್ದಿ: ಕಾಲೇಜು ವಿದ್ಯಾರ್ಥಿನಿಯೊಬ್ಬರು ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ನಗರದ ಕನಕಭವನ ಹಿಂಭಾಗದ ರೈಲ್ವೆ ಟ್ರ್ಯಾಕ್ ನಲ್ಲಿ ನಡೆದಿದೆ.

Home add -Advt

18 ವರ್ಷದ ಲಾವಣ್ಯ ರೈಲಿಗೆ ಸಿಲುಕಿ ಗಾಯಗೊಂಡ ವಿದ್ಯಾರ್ಥಿನಿ. ಲಾವಣ್ಯ ಮಂಡ್ಯದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ. ಮೇಲ್ನೋಟಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಶಂಕೆ ವ್ಯಕ್ತವಾಗಿದೆ.

ಇಂದು ಬೆಳಿಗ್ಗೆ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿ ಮಧ್ಯಾಹ್ನದ ವೇಳೆ ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಇದನ್ನು ಗಮನಿಸಿದ ರೈಲ್ವೆ ಪೊಲೀಸರು ವಿದ್ಯಾರ್ಥಿನಿಯನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ.


Related Articles

Back to top button