Kannada NewsKarnataka NewsLatest

*ವಿದ್ಯಾರ್ಥಿನಿಯ ಅಶ್ಲೀಲ ವಿಡಿಯೋ ಚಿತ್ರೀಕರಣ; ಶಿಕ್ಷಕ ಸೇರಿ ಇಬ್ಬರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ರಾಮನಗರ: ವಿದ್ಯಾರ್ಥಿನಿಯನ್ನು ಹೆದರಿಸಿ ಅಶ್ಲೀಲ ವಿಡಿಯೋ ಚಿತ್ರಿಸಿ ಶೇರ್ ಮಾಡುತ್ತಿದ್ದ ಶಾಲಾ ಶಿಕ್ಷಕ ಸೇರಿದಂತೆ ಇಬ್ಬರು ಆರೋಪಿಗಳನ್ನು ರಾಮನಗರ ಜಿಲ್ಲೆಯ ಕನಕಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದೈಹಿಕ ಶಿಕ್ಷಕ ಅಂತೋಣಿ (51), ನಂದೀಶ್ (32) ಬಂಧಿತ ಆರೋಪಿಗಳು. ವಿದ್ಯಾರ್ಥಿನಿ ಕುಟುಂಬಕ್ಕೆ ತೊಂದರೆ ಕೊಡುವುದಾಗಿ ಹೇಳಿ ಹೆದರಿಸಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿಕೊಡು ಶೇರ್ ಮಾಡುತ್ತಿದ್ದರು.

Home add -Advt

ಸಂತ್ರಸ್ತೆಯ ತಾಯಿ ಕನಕಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.


Related Articles

Back to top button