Latest

ಪ್ರಿಂಟಿಂಗ್ ಮಿಲ್ ನಲ್ಲಿ ಗ್ಯಾಸ್ ಲೀಕ್; 6 ಕಾರ್ಮಿಕರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಸೂರತ್: ಪ್ರಿಂಟಿಂಗ್ ಮಿಲ್ ನಲ್ಲಿ ಗ್ಯಾಸ್ ಲೀಕ್ ಆಗಿ 6 ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಸೂರತ್ ನಲ್ಲಿ ನಡೆದಿದೆ.

ಇಂದು ಮುಂಜಾನೆ ಈ ಘಟನೆ ನಡೆದಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಹಾಗೂ ಪೊಲೀಸ್ ಸಿಬ್ಬಂದಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ದುರಂತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಗ್ಯಾಸ್ ಲೀಕ್ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಸ್ಥಳಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

Home add -Advt

Related Articles

Back to top button