Kannada NewsKarnataka NewsLatest

*ಸಬ್ ಇನ್ಸ್ ಪೆಕ್ಟರ್ ಪತ್ನಿ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ: ಪ್ರೀತಿಸಿ ಮದುವೆಯಾಗಿದ್ದ ಸಬ್ ಇನ್ಸ್ ಪೆಕ್ಟರ್ ಪತ್ನಿ ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನಲ್ಲಿ ಈ ಘಟನೆ ನಡೆದಿದೆ. ಬೀರೂರು ಠಾಣೆಯ ಠಾಣಾಧಿಕಾರಿ ತಿಪ್ಪೇಶ್‌ರವರ ಪತ್ನಿ ಪದ್ಮ (34) ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Home add -Advt

ತಿಪ್ಪೇಶ್ ಹಾಗೂ ಪದ್ಮ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪದ್ಮಾ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಪದ್ಮ ಕುಟುಂಬಸ್ಥರ ಬರುವಿಕೆಗಾಗಿ ಕಾಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.


Related Articles

Back to top button