ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಸಿಬಿ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಓರ್ವರು ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
2018ರಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟು ಎಸಿಬಿ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಬಿಎಂಟಿಎಫ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಆಗಿದ್ದ ಶಿವಕುಮಾರ್ ಜೈಲು ಶಿಕ್ಷೆಗೆ ಗುರಿಯಾದ ಪೊಲೀಸ್ ಅಧಿಕಾರಿ.
ಪ್ರಕರಣವೊಂದರಲ್ಲಿ ಆರೋಪಿಯೊಬ್ಬರನ್ನು ಆರೋಪ ಮುಕ್ತಗೊಳಿಸಲು 80 ಸಾವಿರ ರೂಪಾಯಿ ಲಂಚಕ್ಕಾಗಿ ಶಿವಕುಮಾರ್ ಬೇಡಿಕೆ ಇಟ್ಟಿದ್ದರು. ಕ್ಲರ್ಕ್ ಚೇತನ್ ಮೂಲಕ 50 ಸಾವಿರ ಲಂಚ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ಬಂಧಿಸಿದ್ದರು. ತನಿಖೆ ನಡೆಸಿದ ಅಧಿಕಾರಿಗಳು 2021ರಲ್ಲಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಇದೀಗ ಸಿಟಿ ಸಿವಿಲ್ ಕೋರ್ಟ್ ಶಿವಕುಮಾರ್ ಅವರಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.
ಹೊಳೆಗೆ ಉರುಳಿ ಬಿದ್ದ KSRTC ಬಸ್; 25 ಪ್ರಯಾಣಿಕರಿಗೆ ಗಾಯ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ