Kannada NewsKarnataka NewsNationalPolitics

*ಭಾನುವಾರ ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ ಉಪ ನೋಂದಣಿ ಕಚೇರಿಗಳು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಾದ್ಯಂತ ಇರುವ ಎಲ್ಲಾ ಉಪ ನೋಂದಣಿ ಕಚೇರಿಗಳು (Sub-Registrar Offices) 2026 ನೇ ಜುಲೈ 12 ರ  ಭಾನುವಾರದಂದು ಸಾರ್ವಜನಿಕ ರಜಾ ದಿನವಾಗಿದ್ದರೂ ಸಹ, ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ಇಲಾಖೆಯ ಕಾರ್ಯದೊತ್ತಡ ನಿವಾರಣೆಗಾಗಿ ಎಂದಿನಂತೆ ತೆರೆದಿದ್ದು, ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ.

​ಈ ದಿನದಂದು ಸಾರ್ವಜನಿಕರು ಎಂದಿನಂತೆ ಆಸ್ತಿ ನೋಂದಣಿ, ಮುದ್ರಾಂಕ ಖರೀದಿ ಹಾಗೂ ಇಲಾಖೆಗೆ ಸಂಬಂಧಿಸಿದ ಇತರ ಸೇವೆಗಳನ್ನು ಪಡೆದುಕೊಳ್ಳಬಹುದಾಗಿದೆ. ಸಾರ್ವಜನಿಕರು ಈ ವಿಶೇಷ ಅವಕಾಶದ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆಯು ​ಪ್ರಕಟಣೆಯಲ್ಲಿ ತಿಳಿಸಿದೆ.

Home add -Advt

Related Articles

Back to top button