ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಖಾನಾಪುರ ತಾಲೂಕಿನ ವಿವಿಧ ಗ್ರಾಮಸ್ಥರ ಪರವಾಗಿ ಬಿಜೆಪಿ ಮಹಿಳಾ ಮೋರಾರ್ಚಾ ಉಪಾಧ್ಯಕ್ಷರೂ, ಖಾನಾಪುರ ತಾಲೂಕು ಉಸ್ತುವಾರಿಗಳೂ ಆಗಿರುವ ಡಾ. ಸೋನಾಲಿ ಸರ್ನೋಬತ್ ನೇತೃತ್ವದಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಕಕ್ಕೇರಿಯ ಬಿಷ್ಠಾದೇವಿ ಜಾತ್ರೆಗೆ ಅನುಮತಿ ನೀಡುವಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಗೆ ಹಾಗೂ ಜಾತ್ರೆಗೆ ಸೂಕ್ತ ಬಂದೋಬಸ್ತ್ ಒದಗಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರಿಗೆ ಮನವಿ ಸಲ್ಲಿಸಲಾಯಿತು.
ಜಾತ್ರೆಯನ್ನು ಕೋವಿಡ್ ನಿಯಮ ಪಾಲಿಸಿ ನಡೆಸಲು ಅನುಮತಿ ನೂಡುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.
ಬೋರುಣಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುರಪುರ, ಕೇರವಾಡ, ಕಲ್ಮೇಶ್ವರ ನಗರ ರಸ್ತೆಗಳನ್ನು ದುರಸ್ತಿ ಮಾಡಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಅವರಿಗೆ ಮನವಿ ಸಲ್ಲಿಸಲಾಯಿತು.
ಗಸ್ಟೊಳ್ಳಿ, ಚನಕೆಬೈಲ್ ಗ್ರಾಮಸ್ಥರಿಗೆ ಪಡಿತರ ಚೀಟಿಗಳನ್ನು ನೀಡುವಂತೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳಿಗೆ ಸಹ ಮನವಿ ಸಲ್ಲಿಸಲಾಯಿತು.
ಎಲ್ಲ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸಿದ್ದು, ಆದಷ್ಟು ಶೀಘ್ರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ಸಿಕ್ಕಿದೆ ಎಂದು ಡಾ.ಸೋನಾಲಿ ಸರ್ನೋಬತ್ ಪ್ರಗತಿವಾಹಿನಿಗೆ ತಿಳಿಸಿದ್ದಾರೆ.
ಖಾನಾಪುರದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿ: ಸಿಎಂ ಭೇಟಿಯಾದ ಡಾ.ಸೋನಾಲಿ ಸರ್ನೋಬತ್ ಮನವಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ