Belagavi NewsBelgaum NewsKannada NewsKarnataka NewsLatest

*ರೈತರಿಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತೋಟಗಾರಿಕೆ ಇಲಾಖೆಯಿಂದ 2026-27 ನೇ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಪ್ರತಿ ಹನಿಗೆ ಅಧಿಕ ಬೆಳೆ ಯೋಜನೆಯಡಿ ಹನಿ ನೀರಾವರಿ ವಿವಿಧ ರೀತಿಯ ತುಂತುರು ನೀರಾವರಿ ಘಟಕಕ್ಕೆ ಸಹಾಯಧನ ಲಭ್ಯವಿದ್ದು, ಕಾಫಿ, ಟೀ, ರಬ್ಬರ್ ಹಾಗೂ ಅಡಿಕೆ ಬೆಳೆಗಳನ್ನು ಹೊರತು ಪಡಿಸಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರಿಗೆ ಹನಿ ನೀರಾವರಿ ಅಳವಡಿಸಿ ಸಹಾಯಧನ ನೀಡಲಾಗುತ್ತಿದೆ.

ಹನಿ ನೀರಾವರಿ ಮತ್ತು ತುಂತುರು ನೀರಾವರಿ ಅಳವಡಿಕೆಗೆ ಪ್ರತಿ ಫಲಾನುಭವಿಗಳಿಗೆ ಗರಿಷ್ಟ 5 ಹೆಕ್ಟರ್ ಪ್ರದೇಶದ ವರೆಗೆ ಸಹಾಯಧನ ನೀಡಲಾಗುವುದು ಹಾಗೂ ತರಕಾರಿ ಮತ್ತು ಹೂ ಬೆಳೆಗಳಿಗೆ ಗರಿಷ್ಟ 2 ಹೆಕ್ಟರ್ ಪ್ರದೇಶಕ್ಕೆ ಸಹಾಯಧನ ನೀಡಲಾಗುವುದು. ಎಲ್ಲ ವರ್ಗದ ರೈತರಿಗೆ ಮೊದಲು 2 ಹೆಕ್ಟರ್ ಪ್ರದೇಶದ ವರೆಗೆ ಶೇ. 90 ರಷ್ಟು ಮತ್ತು 2 ಹೆಕ್ಟರ್ ಮೇಲ್ಪಟ್ಟು 5 ಹೆಕ್ಟರ್ ವರೆಗೆ ಶೇ. 45% ಸಹಾಯಧನ ಸೌಲಭ್ಯವಿರುತ್ತದೆ.

Home add -Advt

ಹನಿ ನೀರಾವರಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಘಟಕ ಅಳವಡಿಕೆಗೆ ಈಗಾಗಲೇ ಸಹಾಯಧನ ಪಡೆದು7 ವರ್ಷಗಳಾಗಿದ್ದಲ್ಲಿ ಪ್ರಸಕ್ತ ಸಾಲಿನಲ್ಲಿ ಕೂಡ ಮತ್ತೊಮ್ಮೆ ಹೊಸದಾಗಿ ಸೂಕ್ಷ್ಮ ನೀರಾವರಿ ಘಟಕ ಅಳವಡಿಸಿಕೊಂಡಲ್ಲಿ ಸಹಾಯಧನ ನೀಡಲಾಗುವುದು. ತೋಟಗಾರಿಕೆ ಬೆಳೆಗಳಿಗೆ ಇಲಾಖೆಯಿಂದ ನೋಂದಾಯಿತ ಕಂಪನಿಗಳಿಂದ ಮಾತ್ರ ಹನಿ ನೀರಾವರಿ ಘಟಕ ಅಳವಡಿಸಿಕೊಳ್ಳಲು ಕಡ್ಡಾಯವಾಗಿರುತ್ತದೆ.

ಹನಿ ನೀರಾವರಿ ಅಳವಡಿಸುವ ಪೂರ್ವ ತಾಲ್ಲೂಕಾ ತೋಟಗಾರಿಕೆ ಇಲಾಖೆಯಲ್ಲಿ ಹೆಸರು ನೋಂದಾಯಿತಿ ಕಾರ್ಯಾದೇಶ ಪಡೆಯತಕ್ಕದ್ದು ಹಾಗೂ ಅರ್ಜಿಗಳನ್ನು ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ಕಛೇರಿಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ ಸಂಪರ್ಕಿಸುವಂತೆ ಮಾಹಾಂತೇಶ ಮುರಗೋಡ, ತೋಟಗಾರಿಕೆ ಜಂಟಿ ನಿರ್ದೇಶಕರು (ಜಿಪಂ) ಬೆಳಗಾವಿ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related Articles

Back to top button