
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ 10 ದಿನಗಳ ಹಿಂದೆ ರಸ್ತೆಯಲ್ಲಿ ಹೋಗುತ್ತಿದ್ದ ಇಬ್ಬರು ಯುವತಿಯರನ್ನು ಕಾಮುಕನೊಬ್ಬ ಹಿಂಬದಿಂದ ಬಂದು ಹಿಡಿದು ಅಸಭ್ಯವಾಗಿ ವರ್ತಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ ಈ ಘಟನೆ ನಡೆದಿತ್ತು. ಯುವತಿಯರು ರಸ್ತೆಅಯಲ್ಲಿ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಆರೋಪಿ ಯುವತಿಯರನ್ನು ಹಿಡಿದು, ಖಾಸಗಿ ಅಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ. ಸಿಸಿ ಕ್ಯಾಮರಾದಲ್ಲಿ ಆರೋಪಿಯ ಕೃತ್ಯ ಸೆರೆಯಾಗಿತ್ತು. ಆರೋಪಿ ಬಂಧನಕ್ಕಾಗಿ ಎರಡು ವಿಶೇಷ ತಂಡ ರಚಿಸಲಾಗಿತ್ತು.
ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೇರಳ, ತಮಿಳುನಾಡಿನಲ್ಲಿ ಓಡಾಡುತ್ತಿದ್ದ. ಇದೀಗ ಆರೋಪಿಯನ್ನು ಕೇರಳದಲ್ಲಿ ಸಂಬಂಧಿಕರ ಮನೆಯಲ್ಲಿ ಬಂಧಿಸಲಾಗಿದೆ. ಸಂತೋಷ್ ಬಂಧಿತ ಆರೋಪಿ. ಆರೋಪಿಯನ್ನು ಇಂದು ಕೋರ್ಟ್ ಗೆ ಹಾಜರುಪಡಿಸುವ ಸಾಧ್ಯತೆ ಇದೆ.