Belagavi NewsBelgaum NewsKannada NewsKarnataka NewsLatest

ಜಿಲ್ಲಾ ಆರೋಗ್ಯಾಧಿಕಾರಿ ಹಠಾತ್ ಬದಲಾವಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಡಾ||ಮಹೇಶ್ ಕೋಣಿ ಇವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ.

ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಬೆಳಗಾವಿ ಜಿಲ್ಲಾ ಪ್ರವಾಸದ ದಿನವೇ ಮಹೇಶ ಕೋಣಿ ಅವರನ್ನು ಕೆಲಸದಿಂದ ಬಿಡುಗಡೆಗೊಳಿಸಲಾಗಿದೆ.

Home add -Advt

ಮುಂದಿನ ಸ್ಥಳನಿಯುಕ್ತಿಗಾಗಿ ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಬೆಂಗಳೂರು, ಇವರಲ್ಲಿ ಕಾರ್ಯವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.

ಡಾ||ಎಸ್. ಎಸ್. ಗಡೇದ, ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಚಿಕ್ಕೋಡಿ. ಇವರಿಗೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಹುದ್ದೆಯ ಜೊತೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಬೆಳಗಾವಿ (ಡಾ||ಮಹೇಶ್ ಕೋಣಿ, ಇವರಿಂದ ತೆರವಾದ ಸ್ಥಾನಕ್ಕೆ) ಹುದ್ದೆಗೆ ‘ಕರ್ನಾಟಕ ನಾಗರೀಕ ಸೇವಾ ನಿಯಮಗಳು, 1958ರ ನಿಯಮ-68ರಡಿ ಹೆಚ್ಚುವರಿ ಪ್ರಭಾರದಲ್ಲಿರಿಸಿ ನೇಮಿಸಲಾಗಿದೆ ಎಂದು ಸರಕಾರದ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

Related Articles

Back to top button