ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ತಹಸಿಲ್ದಾರ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅಶೋಕ ಮಣ್ಣಿಕೇರಿ ಹೃದಯಾಘಾತದಿಂದ ಗುರುವಾರ ಬೆಳಗಿನಜಾ ವ ನಿಧನರಾದರು. ಅವರಿಗೆ 46 ವರ್ಷ ವಯಸ್ಸಾಗಿತ್ತು.
ಮೂಲತಃ ಗೋಕಾಕ ತಾಲೂಕಿನ ಕೊಣ್ಣೂರಿನವರಾಗಿದ್ದ ಮಣ್ಣಿಕೇರಿ ಕಂದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ತಹಸಿಲ್ದಾರ ಹುದ್ದೆಗೆ ಪದೋನ್ನತಿ ಪಡೆದಿದ್ದರು. ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಶಾಸಕರಾಗಿದ್ದ ಅವಧಿಯಲ್ಲಿ ಆಪ್ತ ಸಹಾಯಕರಾಗಿ ಕೂಡ ಕೆಲಸ ಮಾಡಿದ್ದರು.
ಗುರುವಾರ ಬೆಳಗಿನಜಾವ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ತುತ್ತಾದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಯೋಜನವಾಗಲಿಲ್ಲ.
ಮಣ್ಣಿಕೇರಿ ಅವರಿಗೆ ಪತ್ನಿ, ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಅಶೋಕ ಮಣ್ಣಿಕೇರಿ ಅವರನ್ನು ಕೊಲೆ ಮಾಡಲಾಗಿದೆ ಎಂದು ಅವರ ಸಹೋದರಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪತ್ನಿ ಮತ್ತು ಪತ್ನಿಯ ಸಹೋದರರು ಸೇರಿ ಕೊಲೆ ಮಾಡಿದ್ದಾರೆ ಎಂದು ಅವರು ದೂರಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ