ಹೆಚ್ಚುವರಿ ಶಿಕ್ಷಕರ ಕೌನ್ಸಲಿಂಗ್ ಹಠಾತ್ ಸ್ಥಗಿತ; ಸಾಮಾನ್ಯ ವರ್ಗಾವಣೆಗೆ ಮತ್ತೆ ಗ್ರಹಣ?

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ತಾಂತ್ರಿಕ ದೋಷವಿದ್ದರೂ ಹೆಚ್ಚುವರಿ ಶಿಕ್ಷಕರ ಕೌನ್ಸೆಲಿಂಗ್ ನಡೆಯುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ದಿನದ ಎಲ್ಲಾ ಪ್ರಕ್ರಿಯೆಯನ್ನು ರದ್ದುಪಡಿಸಿ, ತಾತ್ಕಾಲಿಕವಾಗಿ ಕೌನ್ಸಿಂಗ್ ಪ್ರಕ್ರಿಯೆಯನ್ನು ತಡೆ ಹಿಡಿಯುವಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಆದೇಶ ಹೊರಡಿಸಿದ್ದಾರೆ.

 

ಈ ಕುರಿತು ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ. “ದಿನಾಂಕ: 24.01.2023ರಂದು “ಕೌನ್ಸಿಲಿಂಗ್ ಮುಖಾಂತರ ಹೆಚ್ಚುವರಿ ಶಿಕ್ಷಕರುಗಳಿಗೆ* ಸ್ಥಳ ನಿಯುಕ್ತಿಗೊಳಿಸಲು ಕ್ರಮಕೈಗೊಳ್ಳಲಾಗುತ್ತಿದ್ದು, ಸದರಿ ಪ್ರಕ್ರಿಯೆಯಲ್ಲಿ ತಾಂತ್ರಿಕ ದೋಷದಿಂದಾಗಿ ಹೆಚ್ಚುವರಿ ಶಿಕ್ಷಕರುಗಳ ಪಟ್ಟಿಯಲ್ಲಿ ನ್ಯೂನತೆಗಳಿದ್ದರೂ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ.

ಈ ಹಿನ್ನೆಲೆಯಲ್ಲಿ ಸದರಿ “ಕೌನ್ಸಿಲಿಂಗ್ ಪ್ರಕ್ರಿಯೆ”ಯನ್ನು ತಾತ್ಕಾಲಿಕವಾಗಿ ಕೂಡಲೇ ತಡೆ ಹಿಡಿಯುವಂತೆ ಮತ್ತು ಇಂದಿನ ದಿನದ ಎಲ್ಲಾ ಪ್ರಕ್ರಿಯೆಯನ್ನು ರದ್ದುಪಡಿಸಲು   ಕ್ರಮವಹಿಸುವುದು. ಮುಂದಿನ ಕೌನ್ಸಿಲಿಂಗ್ ಪ್ರಕ್ರಿಯೆ ಕುರಿತು ಪ್ರಸ್ತಾವನೆಯನ್ನು ಆದ್ಯತೆ ಮೇರೆಗೆ ಕಡತದಲ್ಲಿ ಮಂಡಿಸಲು ಅಗತ್ಯ ಕ್ರಮವಹಿಸುವಂತೆ ಸೂಚಿಸಿದೆ” ಎಂದು ತಿಳಿಸಿದ್ದಾರೆ.

 

 

ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ ನ್ನು ತಡೆ ಹಿಡಿದಿರುವದರಿಂದ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ ಪೂರ್ಣವಾಗದೆ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ನಡೆಸುವುದು ಕಷ್ಟ. ಹಾಗಾಗಿ ಸಂಪೂರ್ಣ ವರ್ಗಾವಣೆ ಪ್ರಕ್ರಿಯೆಗೆ ಗ್ರಹಣ ಹಿಡಿಯಲಿದೆಯೇ? ಸರ್ಕಾರದ ನಿರ್ಧಾರಕ್ಕೆ ಕಾದು ನೋಡಬೇಕಿದೆ.

11 ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ

https://pragati.taskdun.com/prime-ministers-national-bal-puraskar-for-11-children/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button