ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ರಾತ್ರಿ 8.15ಕ್ಕೆ ವಿಜಯಪುರದ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಬೊಮ್ಮಾಯಿ ವಿಶೇಷ ವಿಮಾನದ ಮೂಲಕ 4.30ಕ್ಕೆ ಬೆಂಗಳೂರಿನಿಂದ ಹೊರಟು 5.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಅಲ್ಲಿಂದ ರಸ್ತೆ ಮೂಲಕ ವಿಜಯಪುರದ ಜ್ಞಾನಯೋಗಾಶ್ರಮಕ್ಕೆ ರಾತ್ರಿ 8.15ಕ್ಕೆ ಭೇಟಿ ನೀಡಿ ಶ್ರೀ ಸಿದ್ದೇಶ್ವರ ಸ್ವಾಮಿಗಳನ್ನು ಭೇಟಿ ಮಾಡಲಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹ ಮುಖ್ಯಮಂತ್ರಿಗಳ ಜೊತೆ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡುವರು.
ರಾತ್ರಿಯೇ ಹುಬ್ಬಳ್ಳಿಗೆ ಹಿಂದಿರುಗಿ ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿಗಳು ವಾಸ್ತವ್ಯ ಹೂಡಲಿದ್ದಾರೆ.
ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮಿಗಳು ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಈಡಾಗಿರುವುದನ್ನು ಇಲ್ಲಿ ಉಲ್ಲೇಖಿಸಬಹುದು. ಶ್ರೀಗಳ ಆರೋಗ್ಯದ ಕುರಿತಂತೆ ಭಕ್ತರು ಆತಂಕಕ್ಕೊಳಗಾಗಿದ್ದು, ಭಕ್ರಸಾಗರವೇ ಹರಿದು ಬರುತ್ತಿದೆ. ಶುಕ್ರವಾರ ಶ್ರೀಗಳು ಮಹಡಿ ಮೇಲಿಂದಲೇ ಭಕ್ತರಿಗೆ ದರ್ಶನ ನೀಡಿದ್ದಾರೆ. ಶ್ರೀಗಳಿಗೆ ವಿಶ್ರಾಂತಿ ಬೇಕಿರುವುದರಿಂದ ಭಕ್ತರು ಬರದಿಂತೆ ಕಿರಿಯ ಸ್ವಾಮಿಗಳು ಮನವಿ ಮಾಡಿದ್ದಾರೆ.
ಸಿದ್ದೇಶ್ವರ ಸ್ವಾಮೀಜಿಗಳ ದರ್ಶನಕ್ಕೆ ಭಕ್ತಸಾಗರ
https://pragati.taskdun.com/thousends-of-devotees-came-to-siddeshwar-swamijis-darshan/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ